ಏರ್ ಪೋಟ್೯ : ನಾಳೆ ಸಾರ್ವಜನಿಕ ಪ್ರವೇಶ ನಿರ್ಬಂಧಮಂಗಳೂರು;  ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೇ 18 ಸೋಮವಾರ ಬೆಳಿಗ್ಗೆ 11 ಗಂಟೆಯಿಂದ ಸಂಪೂರ್ಣ ಸ್ಯಾನಿಟೈಸೇಶನ್ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ವಿಮಾನನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ.
ಮೇ 12 ರಂದು ದುಬೈ ನಿಂದ ಬಂದ ವಿಮಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 15 ಮಂದಿ ಮತ್ತು ಉಡುಪಿಯ 6 ಮಂದಿಗೆ ಕೊರೊನಾ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಸ್ಯಾನಿಟೈಸೇಸನ್ ಮಾಡಲಾಗುತ್ತದೆ. ಅದೇ ರೀತಿ ನಾಳೆ ದುಬೈ ನಿಂದ ವಿಮಾನ ಬರಲಿದ್ದು ಈ ಕಾರಣದಿಂದ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ

Comments