ಮೊದಲ‌ ಮಳೆಗೆ ಬೈಕಂಪಾಡಿ ಎಪಿಎಂಸಿಯಲ್ಲಿ ಕೊಚ್ಚಿಹೋದ ತರಕಾರಿ


ಮಂಗಳೂರು: ಮಂಗಳೂರಿನ ಸೆಂಟ್ರಲ್ ಮಾರ್ಕೆಟ್ನಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳನ್ನ ಬೈಕಂಪಾಡಿ ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಗೊಳಿಸಿದ ಬೆನ್ನಿಗೆ ಇಂದು ಮೊದಲ ಮಳೆಗೆ ಅಲ್ಲಿನ ವ್ಯಾಪಾರಿಗಳು ಸಾಕಷ್ಟು ನಷ್ಟ ಅನುಭವಿಸಿದ್ದಾರೆ.ಕೋವಿಡ್ 19 ಸಾಂಕ್ರಾಮಿಕ ಹರಡುತ್ತಿರುವ ಸಂದರ್ಭದಲ್ಲಿ ಈಗಿರುವ ಮಾರುಕಟ್ಟೆಯ ವಿನ್ಯಾಸ ಮತ್ತು ರಚನೆ ಸೂಕ್ತವಾಗಿಲ್ಲ ಎಂದು ಮಂಗಳೂರು ಮಹಾನಗರ ಪಾಲಿಕೆ ತರಾತುರಿಯಲ್ಲಿ ಬೈಕಂಪಾಡಿ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗಿತ್ತು.ವ್ಯಾಪಾರಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಬೈಕಂಪಾಡಿ ಮಾರುಕಟ್ಟೆಯಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ಮತ್ತು ಪಾಲಿಕೆ ಭರವಸೆ ನೀಡಿದ್ದರು. ಆದರೆ ಮೊದಲ ಮಳೆಗೆ ಎಪಿಎಂಸಿಯ ಪರಿಸ್ಥಿತಿ ಬಯಲಾಗಿದೆ.

ಇಂದು ಸುರಿದ ಭಾರೀ ಮಳೆಗೆ ತರಕಾರಿಗಳೆಲ್ಲವೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ವ್ಯಾಪಾರಿಗಳ ಬದುಕು ಅತಂತ್ರವಾಗಿದೆ. ವ್ಯಾಪಾರಿಗಳು ಮಹಾನಗರ ಪಾಲಿಕೆ ಮತ್ತು ಶಾಸಕರುಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments