ಪ.ವರ್ಗ ಕಾನೂನು ಪದವಿಧರರಿಗೆ ಪ್ರಾಯೋಗಿಕ ತರಬೇತಿ - ಅರ್ಜಿ ಆಹ್ವಾನಮಂಗಳೂರು :- 2020-21ನೇ ಸಾಲಿನಲ್ಲಿ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವಿಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
  ತರಬೇತಿ ಅವಧಿಯು 2 ವರ್ಷಗಳಾಗಿದ್ದು, ಆಯ್ಕೆಯಾದ ಆಭ್ಯರ್ಥಿಗೆ ಮಾಸಿಕ ರೂ. 10,000 ಶಿಷ್ಯ ವೇತನ ನೀಡಲಾಗುವುದು. ತರಬೇತಿದಾರರಿಗೆ ಕಚೇರಿ ಸ್ಥಾಪಿಸಲು ಹಾಗೂ ಪುಸ್ತಕ ಖರೀದಿಸಲು ತಾಲೂಕು/ಟಿ.ಎಂ.ಸಿ ಕೇಂದ್ರ ಸ್ಥಾನಗಳಲ್ಲಿ ರೂ 50 ಸಾವಿರ ಮತ್ತು ನಗರ ಸಭೆ/ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ರೂ. 1 ಲಕ್ಷ ಅನುದಾನ ನೀಡಲಾಗುವುದು.
       ಆಯ್ಕೆಯಾದ ಆಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರಕಾರಿ ವಕೀಲರು ಅಥವಾ 15 ವರ್ಷಗಳ ವಕೀಲ ವೃತ್ತಿಯಲ್ಲಿ ಅನುಭವವುಳ್ಳ ವಕೀಲ ಅಧೀನದಲ್ಲಿ ತರಬೇತಿ ಪಡೆಯಬೇಕು. ಸುಳ್ಳು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ನೀಡಿದ ಅಭ್ಯರ್ಥಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.
    ದಕ್ಷಿಣ ಕನ್ನಡ ಜಿಲ್ಲೆಯವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅರ್ಜಿ ಸಲ್ಲಿಸಲು ಮೇ 30 ಕೊನೆ ದಿನವಾಗಿದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಅಬ್ಬಕ್ಕನಗರ, ಕೊಟ್ಟಾರ, ಮಂಗಳೂರು-575006 ಇಲ್ಲಿಗೆ ಸಲ್ಲಿಸಬೇಕು.
      ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0824-2451269, 2450114ಯನ್ನು ಸಂಪರ್ಕಿಸಬಹುದು ಎಂದು ದ.ಕ ಜಿಲ್ಲೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಯೋಜನಾ ಸಮಸ್ವಯಾಧಿಕಾರಿ ಪ್ರಕಟಣೆ ತಿಳಿಸಿದೆ.

Comments