ಜುಲೈ 1ರಂದು ಪತ್ರಿಕಾ ದಿನಾಚರಣೆ


  ಮಂಗಳೂರು:ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಜುಲೈ 1ರಂದು ಬೆಳಗ್ಗೆ 11:00ರಿಂದ ಲೇಡಿಹಿಲ್‌ನ ಪತ್ರಿಕಾ ಭವನದಲ್ಲಿ ನಡೆಯಲಿದೆ.

 ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ(ಪರೀಕ್ಷಾಂಗ) ಡಾ.ಪಿ.ಎಲ್ ಧರ್ಮ ಕಾರ್ಯಕ್ರಮವನ್ನು ಉದ್ಘಾಟಿಸುವರು. ಹಿರಿಯ ಪತ್ರಕರ್ತರಾದ ಸುರೇಶ್ ಬೆಳಗಜೆ ‘ಪತ್ರಕರ್ತ, ಪತ್ರಿಕೋದ್ಯಮ ಮತ್ತು ಪ್ರಸ್ತುತತೆ ’ಬಗ್ಗೆ ಉಪನ್ಯಾಸ ನೀಡಲಿರುವರು. ಮೆಸ್ಕಾಂನ ಪ್ರಧಾನ ವ್ಯವಸ್ಥಾಪಕ ಎಚ್.ಕೆ.ಕೃಷ್ಣಮೂರ್ತಿ ಅವರು ಸಂಘದ ಎರಡನೇ ವರ್ಷದ ಬ್ರ್ಯಾಂಡ್ ಮಂಗಳೂರು’ಪ್ರಶಸ್ತಿ ಪ್ರದಾನ ಮಾಡಲಿರುವರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು.

 ಮುಖ್ಯ ಅತಿಥಿಗಳಾಗಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಮತ್ತು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇಬ್ರಾಹಿಂ ಅಡ್ಕಸ್ಥಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Comments