ದ.ಕ ಜಿಲ್ಲೆಯಲ್ಲಿ ಇಂದು ಓರ್ವ ಮಹಿಳೆ ಸಾವು,12 ಮಂದಿಗೆ ಕೊರೊನಾ ದೃಢ, 45 ಮಂದಿ ಗುಣಮುಖಮಂಗಳೂರು: ದ.ಕ. ಜಿಲ್ಲೆಯಲ್ಲಿ ಸತತ 2ನೇ ದಿನವೂ ಕೊರೋನದಿಂದಾಗಿ 57 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಈ ನಡುವೆ ಹೊಸದಾಗಿ 12 ಮಂದಿಗೆ ಕೊರೋನ ದೃಢಪಟ್ಟಿದ್ದು, ಇವರಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ಸೈ ಕೂಡ ಸೇರಿದ್ದಾರೆ.

ಇದೇ ಮೊದಲ ಬಾರಿಗೆ ಒಂದೇ ದಿನ 45 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ಎಸ್‌ಐ ಸೇರಿದಂತೆ 12 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 465ಕ್ಕೆ ಏರಿದೆ.

ಬುಧವಾರ ದೃಢಪಟ್ಟ ಪ್ರಕರಣಗಳ ಪೈಕಿ ನಾಲ್ಕು ಮಂದಿ (29 ವರ್ಷದ ಯುವಕ, 25, 51, 24 ವರ್ಷದ ಮಹಿಳೆಯರು) ಶಾರ್ಜಾದಿಂದ ಬಂದು ಕ್ವಾರಂಟೈನ್ ಇದ್ದವರಾಗಿದ್ದರೆ, ಉಳಿದ ಎಂಟು ಮಂದಿಗೆ ಪ್ರಯಾಣ ಇತಿಹಾಸವೇ ಇಲ್ಲದೆ ಸೋಂಕು ಹರಡಿದೆ.

Comments