ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು;30 ಮಂದಿ ಗುಣಮುಖಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರವೂ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಮತ್ತೆ 13 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು 30 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆಯಾಗಿದ್ದು, ಈ ಪೈಕಿ 10 ಮಂದಿ ಹೊರ ಜಿಲ್ಲೆಯವರು. ಈ ನಡುವೆ 30 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

13 ಸೋಂಕಿತರ ಪೈಕಿ ಜೂ.16ರಂದು ಶಾರ್ಜಾದಿಂದ ಏಳು ಮಂದಿ, ಜೂ.11ರಂದು ಸೌದಿ ಅರೇಬಿಯದಿಂದ ನಾಲ್ವರು ವಾಪಸಾಗಿದ್ದರು. ಎಲ್ಲರನ್ನೂ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಗಂಟಲು ದ್ರವ ಮಾದರಿಯ ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಶುಕ್ರವಾರ 30 ಮಂದಿ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿ ದ್ದಾರೆ. ಈ ಪೈಕಿ ಒಂದು ವರ್ಷದ ಎರಡು ಮಕ್ಕಳು, ಎರಡು ವರ್ಷದ ಮಗು ಹಾಗೂ 16 ವರ್ಷದ ಬಾಲಕ ಗುಣಮುಖರಾಗಿದ್ದಾರೆ. ಇದರೊಂದಿಗೆ 206 ಮಂದಿ ಇದುವರೆಗೆ ಸೋಂಕು ಮುಕ್ತರಾದಂತಾಗಿದೆ.

Comments