ಸ್ಮಾರ್ಟ್ ಸಿಟಿ ವತಿಯಿಂದ ಪಚ್ಚನಾಡಿಯಲ್ಲಿ 2000 ಗಿಡಗಳ ನೆಡುವಿಕೆ


ಮಂಗಳೂರು :- ಮಂಗಳೂರು ಮಹಾನಗರ ಪಾಲಿಕೆ ಮತ್ತು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಮಂಗಳೂರಿನ ಪಚ್ಚನಾಡಿ ಘನ ತ್ಯಾಜ್ಯ ವಿಲೇವಾರಿ ಸಂಸ್ಕರಣಾ ಘಟಕದ ಆವರಣದಲ್ಲಿ ವನಮಹೋತ್ಸವಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಚಾಲನೆ ನೀಡಿದರು.
 ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ವತಿಯಿಂದ ಪಚ್ಚನಾಡಿ ತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ 2000 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇವೆ. ಹಾಗೆ ಪ್ರತಿ ವಾರ್ಡಿನಲ್ಲಿ 50 ಗಿಡಗಳನ್ನು ಸ್ಮಾರ್ಟ್ ಸಿಟಿ ವತಿಯಿಂದ ನೀಡಲಾಗುವುದು. ನಮ್ಮ ಮುಂದಿನ ಪೀಳಿಗೆ  ಕೆಲವು ಅಮೂಲ್ಯ ತಳಿಗಳನ್ನು ನೋಡದ ಪರಿಸ್ಥಿತಿ ಬರಬಹುದು. ನಾವು ಪರಿಸರವನ್ನು ಉಳಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
    ಶಾಸಕರೊಂದಿಗೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ನಝೀರ್, ಉಪಮೇಯರ್ ವೇದಾವತಿ, ಮನಪಾ ಸದಸ್ಯರುಗಳಾದ ಪ್ರೇಮಾನಂದ ಶೆಟ್ಟಿ, ಕಿರಣ್ ಕುಮಾರ್, ಶರತ್, ಸಂಗೀತಾ, ಹೇಮಲತಾ, ಮನೋಜ್, ಸುನೀತಾ, ವಲಯ ಅರಣ್ಯಾಧಿಕಾರಿ ಶ್ರೀಧರ್, ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments