ಲಾಕ್ ಡೌನ್ ಸಂಕಷ್ಟ- 5 ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಮಂಗಳೂರಿನಲ್ಲಿ ಸಿಪಿಎಂ ಪ್ರತಿಭಟನೆ


ಮಂಗಳೂರು: ಲಾಕ್ ಡೌನ್ ನಿಂದ ಬಡಜನರು ಸಂಕಷ್ಟಕ್ಕೊಳಗಾಗಿದ್ದು ಈ ಹಿನ್ನೆಲೆಯಲ್ಲಿ 5 ಬೇಡಿಕೆ ಈಡೇರಿಸಲು ಒತ್ತಾಯಿಸಿ ಮಂಗಳೂರಿನಲ್ಲಿ  ಸಿಪಿಐಎಂ ಪ್ರತಿಭಟನೆ ನಡೆಸಿತು.

  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ಸಿಪಿಎಂ ಕಾರ್ಯಕರ್ತರು ಪ್ರತಿ ವ್ಯಕ್ತಿಗೆ  10 ಕೆಜಿ ಆಹಾರ ಧಾನ್ಯಗಳ ವಿತರಣೆ, ಆದಾಯ ತೆರಿಗೆ ಮಿತಿಯಿಂದ ಹೊರಗಿರುವವರಿಗೆ ಆರು ತಿಂಗಳು 7500 ನೇರ ನಗದು ವರ್ಗಾವಣೆ,ಕಾರ್ಮಿಕರಿಗೆ ವೇತನ, ಕೆಲಸದ ಭದ್ರತೆ, ಉದ್ಯೋಗ ಖಾತ್ರಿ ಯೋಜನೆ ವಿಸ್ತರಣೆ,ಸಾರ್ವಜನಿಕ ಉದ್ದಿಮೆಗಳ ರಕ್ಷಣೆ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಈ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಯ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್, ಜೆ. ಬಾಲಕೃಷ್ಣ ಶೆಟ್ಟಿ, ಹಾಗೂ ಮುಖಂಡರಾದ ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಭಾರತಿ ಬೋಳಾರ್‌, ನವೀನ್‌ ಕೊಂಚಾಡಿ, ಜಯಂತಿ ಬಿ., ಸುರೇಶ್‌ ಬಜಾಲ್‌ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Comments