ಮಳೆಗಾಲದ ದುರಂತ ನಿರ್ವಹಣೆಗೆ ಮಂಗಳೂರಿಗೆ ಎನ್ ಡಿ ಆರ್ ಎಫ್ ತಂಡ ಆಗಮನ


ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಸಂಭವಿಸಬಹುದಾದ ದುರಂತ ಗಳನ್ನು ನಿರ್ವಹಿಸಲು ಎನ್ ಡಿ ಆರ್ ಎಫ್ ತಂಡ ಮಂಗಳೂರಿಗೆ ಆಗಮಿಸಿದೆ.
 ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡವು ಇಂದು ಮಂಗಳೂರಿಗೆ ಆಗಮಿಸಿದೆ. ಸುಮಾರು 25 ಸದಸ್ಯರ NDRF ತಂಡವು ಪಿಲಿಕುಲ ಸ್ಕೌಟ್ಸ್ ಭವನದಲ್ಲಿ ವಾಸ್ತವ್ಯ ಹೂಡಿದೆ. ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪ ಸನ್ನಿವೇಶ ಎದುರಿಸಲು ಜಿಲ್ಲಾಡಳಿತಕ್ಕೆ NDRF ಆಗಮನ ನೆರವಾಗಲಿದೆ.

Comments