ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಗುಣಮುಖಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
40, 52 ವರ್ಷದ ಇಬ್ಬರು ಗಂಡಸರು,42, 59 ಇಬ್ಬರು ಹೆಂಗಸರು ಗುಣಮುಖರಾದವರು.  ಇವರ ಗಂಟಲು ದ್ರವದ ಪರೀಕ್ಷೆ ಎರಡು ಬಾರಿ ನೆಗೆಟಿವ್ ಬಂದಿದ್ದು ಇವರನ್ನು ಗುಣಮುಖ ಎಂದು ಘೋಷಿಸಿ ಮನೆಗೆ ಕಳುಹಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 241 ಪ್ರಕರಣ ದೃಢಪಟ್ಟಿದ್ದು ಇದರಲ್ಲಿ 129 ಮಂದಿ ಗುಣಮುಖರಾಗಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದು 105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ

Comments