ಸಪ್ತಪದಿ ನಿಶ್ಚಿತವಾಗಿ ನಡೆಯುತ್ತದೆ; ಸಚಿವ ಕೋಟ ಶ್ರೀನಿವಾಸ ಪೂಜಾರಿಮಂಗಳೂರು: ಕೊರೊನಾದಿಂದ ಮುಂದೂಡಲ್ಪಟ್ಟಿರುವ ಸಪ್ತಪದಿ ವಿವಾಹ ಕಾರ್ಯಕ್ರಮ  ನಿಶ್ಚಿತವಾಗಿ ನಡೆಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು  ಸಪ್ತಪದಿ ವಿವಾಹ ಕಾರ್ಯಕ್ರಮ ಎ.26 ಮತ್ತು ಮೇ 24 ರಂದು ನಡೆಯಬೇಕಿತ್ತು. ಆದರೆ ಕೊರೊನಾದಿಂದ ಅದು ಮುಂದೂಡಲ್ಪಟ್ಟಿದೆ. ಈ ವಿವಾಹ ಕಾರ್ಯಕ್ರಮ ನಿಶ್ಚಿತವಾಗಿ ನಡೆಯಲಿದೆ ಎಂದು ತಿಳಿಸಿದರು.
ಸಪ್ತಪದಿ ವಿವಾಹಕ್ಕೆ ರಾಜ್ಯಾದಾದ್ಯಂತ 4500 ಅರ್ಜಿಗಳು ಬಂದಿದ್ದವು. ಇವುಗಳಲ್ಲಿ 1500 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮುಖ್ಯಮಂತ್ರಿಗಳು 50 ಜನರಿದ್ದು ವಿವಾಹ ಕಾರ್ಯಕ್ರಮ ನಡೆಸಬಹುದು ಎಂದು ತಿಳಿಸಿದ್ದಾರೆ. ಅದರಂತೆ ಈ ಬಗ್ಗೆ ಮುಹೂರ್ತ ಸಿದ್ದಪಡಿಸಿ ಸಪ್ತಪದಿ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

Comments