ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ಆಸ್ಪತ್ರೆಗೆ ದಾಖಲು


ಮಂಗಳೂರು: ಕಿಡ್ನಿ ಸೋಂಕಿನಿಂದ  ಮಾಜಿ ಕೇಂದ್ರ ಸಚಿವ  ಆಸ್ಕರ್ ಫರ್ನಾಂಡಿಸ್​ ಅವರು ಮಂಗಳೂರಿನ ಖಾಸಗಿ  ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರಿನ ಕೊಡಿಯಾಲ್ ಬೈಲ್​ನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರು ಕಿಡ್ನಿ ಸೋಂಕಿನಿಂದ ಕಳೆದ ಎರಡು ದಿನಗಳ ಹಿಂದೆ ದಾಖಲಾಗಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ಅವರಿಗೆ ಡಯಾಲಿಸಿಸ್ ಮಾಡಲಾಗುತ್ತಿತ್ತು. ಈ ಬಾರಿ ಕಿಡ್ನಿ ಸೋಂಕು ಕಾಣಿಸಿಕೊಂಡ ಪರಿಣಾಮ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ನಾಳೆ ಡಯಾಲಿಸಿಸ್ ಮಾಡಿಸಿಕೊಂಡು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Comments