ಬಜಾಲ್ ವಾರ್ಡ್ - ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ


ಮಂಗಳೂರು ಮಹಾನಗರ ಪಾಲಿಕೆ ಬಜಾಲ್ ವಾರ್ಡಿನ ಜಯನಗರದ ಬಳಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಬಳಿಕ ಮಾತನಾಡಿದ ಶಾಸಕ ಕಾಮತ್, ಬಜಾಲ್ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಜಯನಗರ ಪರಿಸರದ ಜನರಿಗೆ ಹಿಂದೆ ನೀಡಿದ ವಾಗ್ದಾನದಂತೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

5 ಲಕ್ಷ ಅನುದಾನದಲ್ಲಿ ಚರಂಡಿ, ರಸ್ತೆ ಹಾಗೂ ತಡೆಗೋಡೆ ನಿರ್ಮಾಣವಾಗಲಿದೆ. ಶೀಘ್ರವೇ ಕಾಮಗಾರಿ ಪ್ರಾರಂಭಿಸಬೇಕೆಂದು ಗುತ್ತಿಗೆದಾರರಿಗೂ ಸೂಚನೆ ನೀಡಿದ್ದೇನೆ. ಈ ವಾರ್ಡಿನ ಅಭಿವೃದ್ಧಿಗೆ ಕಳೆದ ಎರಡು ವರ್ಷಗಳಲ್ಲಿ ಅತೀ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ವಿಶೇಷ ಅನುದಾನ ಬಿಡುಗಡೆಗೊಳಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಸ್ಥಳೀಯ ಪಾಲಿಕೆ ಸದಸ್ಯ ಅಶ್ರಫ್, ಬಿಜೆಪಿ ಮುಖಂಡರಾದ ಚಂದ್ರಶೇಖರ ಜಯನಗರ, ಶಿವಾಜಿ ರಾವ್,ವೇಣುಗೋಪಾಲ, ಪ್ರಸಾದ್ ಶೆಟ್ಟಿ, ಚರಿತ್ ಪೂಜಾರಿ, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Comments