ಇನ್ನೊಂದು ವರ್ಷಕ್ಕೆ ನೂತನ ದ.ಕ ಜಿಲ್ಲಾಧಿಕಾರಿ ಕಚೇರಿ ಕಾಮಗಾರಿ ಪೂರ್ಣ ಗೊಳಿಸಲು ಚಿಂತನೆ; ಸಚಿವ ಕೋಟ


ಮಂಗಳೂರು; ಮಂಗಳೂರಿನ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಇನ್ನೊಂದು ವರ್ಷದೊಳಗೆ ಪೂರ್ಣಗೊಳಿಸುವ ಚಿಂತನೆ ಇದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ ‌.
ಪಡೀಲ್ ನಲ್ಲಿ ಜಿಲ್ಲಾಧಿಕಾರಿ ಕಚೇರಿ ಕಾಮಗಾರಿ ಯನ್ನು ವೀಕ್ಷಿಸಿ ಮಾತನಾಡಿದ ಅವರು ಜಿಲ್ಲಾಧಿಕಾರಿ ಜೊತೆಗೆ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ವೀಕ್ಷಿಸಿದ್ದೇನೆ. ಆರಂಭದಲ್ಲಿ ಇದಕ್ಕೆ 41 ಕೋಟಿ ಯೋಜನವೆಚ್ಚ ನಿಗದಿಪಡಿಸಲಾಗಿತ್ತು. ಈಗ ಅದು 76 ಕೋಟಿ ಆಗಿದೆ. ಹಂತಹಂತವಾಗಿ ಹಣ ಬಿಡುಗಡೆಗೊಳಿಸಿ ಇನ್ನೊಂದು ವರ್ಷದೊಳಗೆ ಇದನ್ನು ಪೂರ್ಣಗೊಳಿಸಲಾಗುವುದು. ಈ ಬಗ್ಗೆ ಕಂದಾಯ ಸಚಿವರ ಜೊತೆಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

Comments