ಬಿಜೆಪಿ ರಾಜ್ಯಾಧ್ಯಕ್ಷರ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಮಾಯ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರು,ಸಚಿವ ಕೋಟ ಶ್ರೀನಿವಾಸ ಪೂಜಾರಿ  ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ    ಸಾಮಾಜಿಕ ಅಂತರವನ್ನು ಉಲ್ಲಂಘಿಸಿದ ಘಟನೆ ನಡೆದಿದೆ.
ಇಂದು ಮಂಗಳೂರಿನ ಗುರುಪುರ ಸೇತುವೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದ ವೇಳೆ
  ಸಾಮಾಜಿಕ ಅಂತರವಿಲ್ದೇ ಲಾಕ್ ಡೌನ್ ನಿಯಮ ಉಲ್ಲಂಘಿಸಲಾಗಿದೆ. ಕಾರ್ಯಕ್ರಮದಲ್ಲಿ 300 ಅಧಿಕ ಮಂದಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು.ಆದರೆ ಇದೇ ವೇಳೆ ಸಾಮಾಜಿಕ ಅಂತರ ಮರೆತು ಸೇತುವೆ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದಾರೆ.

Comments