ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ದೃಢಮಂಗಳೂರು; ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಇಂದು ನಾಲ್ವರಿಗೆ ಕೊರೊನಾ ದೃಢಪಟ್ಟಿದೆ.
ಒಬ್ಬರು ದುಬೈನಿಂದ ಮತ್ತು ಮೂವರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ದುಬೈ ನಿಂದ ಬಂದ 28 ವರ್ಷದ ಯುವತಿ, ಮಹಾರಾಷ್ಟ್ರದಿಂದ ಬಂದ 48 , 50,34 ವರ್ಷದ ಪುರುಷರಿಗೆ ಕೊರೊನಾ ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 143 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ 73 ಮಂದಿ ಗುಣಮುಖರಾಗಿದ್ದು 7 ಮಂದಿ ಸಾವನ್ನಪ್ಪಿದ್ದಾರೆ. 63 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments