ದ.ಕ ಜಿಲ್ಲೆಗೆ ಮುಂಗಾರು ಪ್ರವೇಶ: ಸಾಧಾರಣ ಮಳೆಮಂಗಳೂರು:  ಜೂನ್ 1ರಂದು ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ಮಳೆ ಇಂದು ಕರ್ನಾಟಕಕ್ಕೆ ಪ್ರವೇಶಿಸಿದೆ. ಮಧ್ಯಾಹ್ನದ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಮುಂಗಾರು ಪ್ರವೇಶಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.ಕೇರಳಕ್ಕೆ ಪ್ರವೇಶಗೊಂಡ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಪ್ರವೇಶವಾಗುತ್ತದೆ. ಆದರೆ ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಮುಂಗಾರು ದುರ್ಬಲಗೊಂಡ ಹಿನ್ನೆಲೆಯಲ್ಲಿ ಎರಡು ದಿನ ವಿಳಂಬವಾಗಿ ಪ್ರವೇಶಿಸಿದೆ.

Comments