ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಪ್ರಕರಣ ಕೊರೊನಾ ಪ್ರಕರಣ ದೃಢಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ಕು ಪ್ರಕರಣ ದೃಢಪಟ್ಟಿದೆ.
ನಾಲ್ಕು ಪ್ರಕರಣಗಳಲ್ಲಿ ಒಂದು ಗುಜರಾತ್ ನಿಂದ ಬಂದವರಾಗಿದ್ದು ಒಂದು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು , ಇಬ್ಬರ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ.
45 ವರ್ಷದ ‌ಮಹಿಳೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 50 ವರ್ಷದ ಪುರುಷ ಗುಜರಾತ್ ರಾಜ್ಯದಿಂದ ಬಂದವರಾಗಿದ್ದಾರೆ. 24 ವರ್ಷದ ಯುವತಿ ಮತ್ತು 27 ವರ್ಷದ ಯುವಕನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 137 ಸೋಂಕಿತರು ಪತ್ತೆಯಾಗಿದ್ದು 74 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Comments