ಬಾಡಿಗೆ ವಿಚಾರದಲ್ಲಿ ಕರ್ತವ್ಯಲೋಪ ಆರೋಪ: ಕುಕ್ಕೆ ದೇವಸ್ಥಾನದ ಇಬ್ಬರು ನೌಕರರು ಅಮಾನತು


ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧೀನದ ಅಂಗಡಿಗಳ ಬಾಡಿಗೆ ಸಂಗ್ರಹ ವಿಚಾರದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದಲ್ಲಿ ದೇವಸ್ಥಾನದ ಇಬ್ಬರು ನೌಕರರನ್ನು ಅಮಾನತು ಮಾಡಲಾಗಿದೆ.
ಅಂಗಡಿಗಳ ಬಾಡಿಗೆ ವಸೂಲಿ ಮಾಡುವಲ್ಲಿ ಎಡವಿರುವ ಹಿನ್ನೆಲೆ ಅಮಾನತು ಮಾಡಲಾಗಿದೆ. 

ದೇವಳದ ಆಡಳಿತ ಕಚೇರಿಯ ಸಿಬ್ಬಂದಿ, ಕೇಸ್ ವರ್ಕರ್ಸ್ ಆಗಿರುವ ಬಾಲಸುಬ್ರಹ್ಮಣ್ಯ ಮಾರಾರ್ ಮತ್ತು ಲೋಕೇಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ.

Comments