ಸಂಸದೆ ಶೋಭಾ ಕರಂದ್ಲಾಜೆ ರಾಜಿನಾಮೆಗೆ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್ ಒತ್ತಾಯ

ಮಂಗಳೂರು;ಸಂಸದೆ ಶೋಭಾ ಕರಂದ್ಲಾಜೆಯವರು ಮೊನ್ನೆ ಪತ್ರಿಕಾ ಹೇಳಿಕೆ ನೀಡುತ್ತಾ  ಮಹಾರಾಷ್ಟ್ರ ದಿಂದ ಬರುವವರ ಪಾಸ್ ತಡೆಹಿಡಿಯಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಮತ್ತು ಇಲ್ಲಿ ತಬ್ಲೀಕ್ ನವರು ಕೊರೋನ ಹರಡುತ್ತಿದ್ದಾರೆ. ಎಂಬ ಅಸಂಬದ್ಧ ಮಾತುಗಳನ್ನಾಡುವ ಮೂಲಕ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. 

ಉಡುಪಿ ಜಿಲ್ಲೆಯ ಬಹಳಷ್ಟು ಮಂದಿ ಮುಂಬಯಿಯಲ್ಲಿ ಉದ್ಯಮಗಳನ್ನು ನಡೆಸುತ್ತಿದ್ದಾರೆ. ಇದೀಗ ಕೊರೋನದ ಸಂದಿಗ್ಧ ಪರಿಸ್ಥಿತಿಯಲ್ಲಿ ಉಡುಪಿ ಜಿಲ್ಲೆಯವರನ್ನು ತಮ್ಮ ಊರಿಗೆ ಕರೆತರುವ ಮಹತ್ತರ ಜವಾಬ್ದಾರಿ ಹೊತ್ತಿರುವ ಸಂಸದೆಯೇ ಉಡುಪಿಯವರನ್ನು
ತಮ್ಮ ಊರಿಗೆ ಬರಲು ಬಿಡುವುದಿಲ್ಲ ಎಂಬಂತಹ ಹೇಳಿಕೆ ನೀಡಿರುವುದು ಅತ್ಯಂತ ಹಾಸ್ಯಾಸ್ಪದವಾಗಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮತ್ತು ಇವರು ನೈತಿಕ ಜವಾಬ್ದಾರಿಯನ್ನು ಹೊತ್ತುಕೊಂಡು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಕೆ.ಅಶ್ರಫ್ ರವರು ಒತ್ತಾಯಿಸಿದ್ದಾರೆ.

ಮಾತ್ರವಲ್ಲ ಕ್ಷೇತ್ರದಲ್ಲಿ ತನ್ನ ವೈಫಲ್ಯತೆಯನ್ನು ಮರೆಮಾಚಲು ಮತ್ತು ಜನರ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ತಬ್ಲೀಕ್ ನವರು, ಮುಸ್ಲಿಮರು ಕೊರೋನ ಹರಡಲು ಕಾರಣ ಎಂಬ ಬಾಲಿಶ ಹೇಳಿಕೆ ನೀಡುವ ಮೂಲಕ ಕೋಮು ವೈಷಮ್ಯವನ್ನು ಹರಡುವ ಪ್ರಯತ್ನ ಮಾಡುತ್ತಿದ್ದಾರೆ.

ಸಮಾಜದ ಶಾಂತಿ ನೆಮ್ಮದಿ ಕೆಡಿಸಲು ಪ್ರಯತ್ನಿಸುತ್ತಿರುವ ಇವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಶ್ರಫ್ ಆಗ್ರಹಿಸಿದ್ದಾರೆ.

Comments