ಬಜಾಲ್ ವಾರ್ಡ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ


ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಯನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಬಜಾಲ್ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದೇನೆ. ಇಲ್ಲಿನ ಜನರ ಬೇಡಿಕೆಯ ಅನುಸಾರ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಜಾಲ್ ಜಯನಗರ ಮುಖ್ಯರಸ್ತೆಯಿಂದ ಅಡ್ಡರಸ್ತೆಯ ಬಳಿ ರಸ್ತೆ ಅಭಿವೃದ್ಧಿ,ಚರಂಡಿ ಕಾಮಗಾರಿಗೆ 4 ಲಕ್ಷ ಬಿಡುಗಡೆಗೊಳಿಸಲಾಗಿದೆ. ಈ ವಾರ್ಡಿನ ಸಮಗ್ರ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಮುಂದಿನ ಅವಧಿಯ ಒಳಗಾಗಿ ಬಜಾಲ್ ವಾರ್ಡನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಈ ಸಂಧರ್ಭದಲ್ಲಿ ಮನಪಾ ಸದಸ್ಯರಾದ ಅಶ್ರಫ್, ಬಿಜೆಪಿ ಮುಖಂಡರಾದ ಚಂದ್ರಶೇಖರ ಜಯನಗರ, ಶಿವಾಜಿ ರಾವ್, ವೇಣುಗೋಪಾಲ, ಪ್ರಸಾದ್ ಶೆಟ್ಟಿ, ಚರಿತ್ ಪೂಜಾರಿ, ವೃಂದಾ ಹೆಗಡೆ, ಪುಷ್ಪರಾಜ್ ಹಾಗೂ ಕಾರ್ಯಕರ್ತರು, ಮನಪಾ ಅಧಿಕಾರಿಗಳು ಉಪಸ್ಥಿತರಿದ್ದರು.

Comments