ಕರ್ನಾಟಕದ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಹೋಗಲು ಅನುಮತಿ ನೀಡುವಂತೆ ಡಿವೈಎಫ್ ಐ ಮನವಿ


ಮಂಗಳೂರು;ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯ ಕರ್ನಾಟಕ ಗಡಿಭಾಗದ ಸಾಯ ಮತ್ತು ಚವರ್ಕಾಡ್ ಪ್ರದೇಶದ ನಿವಾಸಿಗಳಿಗೆ ಕರ್ನಾಟಕದ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಹೋಗಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಡಿ.ವೈ.ಎಫ್.ಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಗಳಿಗೆ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಲಾಯಿತು. 
ನಿಯೋಗದಲ್ಲಿ ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ,  ವಿಟ್ಲ ವಲಯ ಸಮಿತಿ ಅಧ್ಯಕ್ಷರಾದ ನುಜುಂ ಅಳಿಕೆ, ತಮೀಮ್ ಮುಂತಾದವರು ಉಪಸ್ಥಿತರಿದ್ದರು.

Comments