ಬಹುವರ್ಷಗಳ ಬೇಡಿಕೆಯಾಗಿದ್ದ ನೂತನ ಗುರುಪುರ ಸೇತುವೆ ನಾಳೆ ಉದ್ಘಾಟನೆ


ಮಂಗಳೂರು: ಬಹುವರ್ಷಗಳ ಬೇಡಿಕೆಯ ಗುರುಪುರ ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದು, ಜೂನ್ 12ರಂದು ಲೋಕಾರ್ಪಣೆಗೊಳ್ಳಲಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಅವರು, ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುರುಪುರ ನದಿಗೆ ಸೇತುವೆ ನಿರ್ಮಿಸಲು ಕೇಂದ್ರ ಸರ್ಕಾರದಿಂದ ಸುಮಾರು 89.42 ಕೋಟಿ ರೂಪಾಯಿ ಅನುದಾನ ಒದಗಿಸಿಕೊಟ್ಟಿದ್ದರು. ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಜೂನ್ 12ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸೇತುವೆಯನ್ನು ಉದ್ಘಾಟಿಸಲಿದ್ದಾರೆ.

Comments