ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಂತ್ರಜ್ಞಾನ ಮೂಲಕ ಕ್ವಾರಂಟೈನ್ ವಾಚ್: ಜಿಲ್ಲಾಧಿಕಾರಿ ಸಿಂಧು ರೂಪೇಶ್


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊರರಾಜ್ಯ, ದೇಶಗಳಿಂದ ಬರುವವರ ಸಂಖ್ಯೆ ಅಧಿಕಗೊಳ್ಳುವ ನಿರೀಕ್ಷೆ ಇರುವ ಕಾರಣ ತಂತ್ರಜ್ಞಾನದ ಮೂಲಕ ಆ್ಯಪ್ ಸಿದ್ಧಪಡಿಸಿ ಕ್ವಾರಂಟೈನ್ ವಾಚ್ ಅನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧು ರೂಪೇಶ್ ಹೇಳಿದ್ದಾರೆ.
ಶನಿವಾರ ಬಂಟ್ವಾಳ ತಾ.ಪಂ.ನ ಎಸ್ಜಿಎಸ್ವೈ ಸಭಾಂಗಣದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿರುವವರ ಮಾಹಿತಿ ಹಾಗೂ ಅದರ ಹೊಸ ತಾಂತ್ರಿಕ ವ್ಯವಸ್ಥೆಗಳ ಕುರಿತು ತಾಲೂಕಿನ ಗ್ರಾ.ಪಂ.ಗಳ ಪಿಡಿಒ, ಗ್ರಾಮಕರಣಿಕರು ಹಾಗೂ ಬಿಲ್ ಕಲೆಕ್ಟರ್ಗಳ ಸಭೆ ನಡೆಸಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಎಡಿಸಿ ಎಂ.ಜೆ.ರೂಪ, ಮಂಗಳೂರು ಸಹಾಯಕ ಕಮೀಷನರ್ ಮದನ್ಮೋಹನ್ ಸಿ, ಬಂಟ್ವಾಳ ತಾ.ಪಂ.ಇಒ ರಾಜಣ್ಣ, ತಹಶೀಲ್ದಾರ್ ರಶ್ಮಿ ಎಸ್.ಆರ್, ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು ಮೊದಲಾದವರು ಸಭೆಯಲ್ಲಿದ್ದರು.

Comments