ಮೂಡ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ನಾಳೆ ಅಧಿಕಾರ ಸ್ವೀಕಾರ


ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡ) ಅಧ್ಯಕ್ಷರಾಗಿ ನೇಮಕವಾದ ರವಿಶಂಕರ್ ಮಿಜಾರ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ.

ನಾಳೆ ಬೆಳಿಗ್ಗೆ 9.30 ಕ್ಕೆ ಮೂಡ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

 ಅವರನ್ನು ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಇಲಾಖೆ ಬುಧವಾರ ಮೂಡ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು

 ರವಿಶಂಕರ್ ಮಿಜಾರ್ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಕಗೊಳಿಸಿ ಪ್ರಾಧಿಕಾರದ ಸರಕಾರದ ಅಧೀನ ಕಾರ್ಯದರ್ಶಿ ಸಿ.ಎಸ್. ಶಿವಕುಮಾರಸ್ವಾಮಿ ಆದೇಶಿಸಿದ್ದಾರೆ.

ಮಿಜಾರ್ ಅವರು ದ.ಕ. ಜಿಲ್ಲಾ ಬಿಜೆಪಿ ಘಟಕದ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮೊದಲು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

Comments