ಬಜಾಲ್ ಬೀಡು ರಸ್ತೆ ಅಭಿವೃದ್ಧಿಗೆ ಶಾಸಕ ಕಾಮತ್ ಗುದ್ದಲಿಪೂಜೆ


ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ವಾರ್ಡಿನ ಬಜಾಲ್ ಬೀಡು ರಸ್ತೆಯಿಂದ ತೆರಳುವ ಅಡ್ಡರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ‌ಡಿ.ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬಜಾಲ್ ಬೀಡು ರಸ್ತೆಯ ಅಡ್ಡರಸ್ತೆ ಅಭಿವೃದ್ಧಿ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ವಿಶೇಷ ಅನುದಾನದಿಂದ 4.5 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಈ ಪರಿಸರದಲ್ಲಿ ಸಂಚಾರಕ್ಕೆ ಸಮಸ್ಯೆಯಾಗುವ ಕುರಿತು ಸ್ಥಳೀಯ ಮುಖಂಡರು ನನ್ನ ಗಮನಕ್ಕೆ ತಂದಿದ್ದರು. ಹಾಗಾಗಿ ಕಳೆದ ಕೆಲ ತಿಂಗಳ ಹಿಂದೆ ಈ ಪರಿಸರಕಿಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುದಾನ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದ್ದೆ. ಆಪ್ರಕಾರ ಇಂದು ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದ್ದೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ನಮ್ಮ ಸರಕಾರ ಆಡಳಿತಕ್ಕೇರಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಅನುದಾನ ನೀಡಿದ್ದಾರೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ವ್ಯಾಪ್ತಿಯ 38 ವಾರ್ಡ್ ಗಳಲ್ಲಿ ಈ ಅನುದಾನದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯೋಜನೆ ರೂಪಿಸಲಾಗಿದೆ. ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಇನ್ನಷ್ಟು ಅನುದಾನ ತರಲಾಗುವುದು ಎಂದಿದ್ದಾರೆ.

ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಅಶ್ರಫ್, ಬಿಜೆಪಿ ಮುಖಂಡರಾದ ಚಂದ್ರಶೇಖರ ಜಯನಗರ, ಶಿವಾಜಿ ರಾವ್, ವೇಣುಗೋಪಾಲ, ಪ್ರಸಾದ್ ಶೆಟ್ಟಿ, ಚರಿತ್ ಪೂಜಾರಿ, ಗಣೇಶ್, ವಿನೀತ್, ದೇವದಾಸ್ ಮೇಲಾಂಟ ಹಾಗೂ ಕಾರ್ಯಕರ್ತರು, ಮನಪಾ ಅಧಿಕಾರಿಗಳು ಉಪಸ್ಥಿತರಿದ್ದರು.

Comments