ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಮಹಿಳೆ ಬಲಿ



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮಹಿಳೆಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಮಹಿಳೆಗೆ ಕೊರೋನಾ ಪಾಸಿಟಿವ್ ಆಗಿ ಮೃತಪಟ್ಟಿದ್ದಾರೆ.

ಮಂಗಳೂರಿನ ಉಳ್ಳಾಲದ ಅಝಾದ್ ನಗರದ 57 ವರ್ಷದ ಮಹಿಳೆಯನ್ನು ಬೇಧಿಯ ಕಾರಣದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು 8 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು.ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದ್ದು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು.ಇಂದು ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ

Comments