ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಪ್ರಗತಿ ಪರಿಶೀಲನಾ ಸಭೆ


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಂಬಂಧಪಟ್ಟ ಪ್ರಗತಿ ಪರಿಶೀಲಾ ಸಭೆಯು ಶಾಸಕ ವೇದವ್ಯಾಸ್ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. 

ಮಂಗಳೂರು ನಗರದ  ಅಭಿವೃದ್ಧಿಗಾಗಿ ಹಾಗೂ ಪ್ರಸ್ತುತ ನಿಯಮಾವಳಿಗಳ ಪ್ರಕಾರ ವಾಣಿಜ್ಯ ಹಾಗೂ ವಾಣಿಜ್ಯೇತರ ನಿವೇಶನ ಮಂಜೂರಾತಿಗಾಗಿ ಈಗಾಗಲೇ ಕಟ್ಟುತ್ತಿರುವ ಶುಲ್ಕದ ಮೇಲೆ ಕ್ರಮವಾಗಿ ವಾಸ್ತವ್ಯ ಕಟ್ಟಡಗಳಿಗೆ 0.5 ಹಾಗೂ ವಾಣಿಜ್ಯ ಕಟ್ಟಡಗಳಿಗೆ 1.5 ತೆರಿಗೆಯನ್ನು ವಿಧಿಸಿದ್ದು ಈ ತೆರಿಗೆ ಕಡಿತಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಏಕ ನಿವೇಶನವನ್ನು ಅರ್ಜಿ ಸ್ವೀಕರಿಸಿದ 15 ದಿನಗಳ ಒಳಗಾಗಿ ನೀಡಲು ಕ್ರಮ ವಹಿಸಲು ನಿರ್ಣಯಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯಲ್ಲಿ ಸಾರ್ವಜನಿಕ ಸಹಾಯಕ್ಕಾಗಿ ಮಾಹಿತಿ ನೀಡಲು ಪ್ರತ್ಯೇಕ ಮಾಹಿತಿ ಕೇಂದ್ರ ತೆರೆಯಲು ನಿರ್ಣಯ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀನೆಗಾಗಿ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಲು ನಿರ್ಣಯಿಸಲಾಗಿದೆ.ಈಗಾಗಲೇ ನೂತನ ಅದ್ಯಕ್ಷರ ಆಯ್ಕೆ ನಡೆದಿದ್ಜು ನಗರದ ಅಭಿವೃದ್ಧಿಗೆ ಅವರ ಯೋಜನೆಗಳನ್ನು ಸಾಕಾರಗೊಳಿಸಲು ಕೈಜೋಡಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ ‌

ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಶ್ರೀಮತಿ ಪೂರ್ಣಿಮಾ, ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಶಕಿಲಾ ಕಾವಾ, ಹಿರಿಯ ಅಭಿಯಂತರ ಗಣೇಶ್, ನಗರ ಯೋಜನಾಧಿಕಾರಿಗಳು, ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು, ಕ್ರೆಡಾಯ್ ಪದಾಧಿಕಾರಿಗಳು, ಎಂಜಿನಿಯರ್ ಅಸೋಸಿಯೇಷನ್, ಧರ್ಮರಾಜ್, ಸಾಮಾಜಿಕ ಕಾರ್ಯಕರ್ತ ಹನುಮಂತ್ ಕಾಮತ್, ಗೋಪಾಲ್ ಕೃಷ್ಣ ಭಟ್,

Comments