ಮಂಗಳೂರಿನ ಐವರು ಪಿಜಿ ವೈದ್ಯರಿಗೆ ಕೊರೊನಾಮಂಗಳೂರು : ನಗರದ ಐದು ಮಂದಿ ಪಿಜಿ ವೈದ್ಯರಿಗೆ ಕೊರೋನ ಸೋಂಕು ತಗಲಿದೆ ಎಂದು ದ.ಕ‌. ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

ಐವರು ಪಿಜಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ತಗಲಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಐವರು ಕೆಎಂಸಿ ಯ ಸ್ನಾತಕೋತ್ತರ ಪದವಿ ಕಲಿಯುತ್ತಿರುವ ವೈದ್ಯ ವಿದ್ಯಾರ್ಥಿಗಳಾಗಿದ್ದಾರೆ

Comments