ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಎಸ್ ಡಿಪಿಐ ವತಿಯಿಂದ ಬಂಟ್ವಾಳದಲ್ಲಿ ಪ್ರತಿಭಟನೆ


ಬಂಟ್ವಾಳ :ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಓಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೆತ್ರ ಸಮಿತಿ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಜನ ವಿರೋಧಿ ನೀತಿ ವಿರುದ್ಧ  ಪ್ರತಿಭಟನೆ ನಡೆಯಿತು. ಪ್ರತಿಭಟನೆ ಯನ್ನು ಉದ್ದೇಶಿಸಿ ರಾಜ್ಯ ಸಮಿತಿ ಸದಸ್ಯರಾದ ರಿಯಾಜ್ ಫರಂಗಿಪೇಟೆ ಮಾತಾಡಿ ಕೊರೋನಾ ತಡೆ ಗಟ್ಟು ವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದ್ದು ಕೊರೋನಾ ವಿಚಾರದಲ್ಲಿಯು ನೀಚ ರಾಜಕೀಯ ಮಾಡೋದು ಶೋಭೆ ತರುವ ವಿಚಾರವಲ್ಲ ಎಂದು ಅಭಿಪ್ರಾಯ ಪಟ್ಟರು. 
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್ ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ಮಾತಾಡಿದರು. 
ಬಂಟ್ವಾಳ ಪುರಸಭಾ ಸದಸ್ಯರಾದ ಮುನೀಶ್ ಅಲಿ  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ ಸದಸ್ಯರಾದ ಸಲೀಂ ಅಲಾಡಿ ರೌಫ್ ಕಲಾಯಿ ಉಪಸ್ಥಿರಿದ್ದರು ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ ಸ್ವಾಗತಿಸಿ ವಂದಿಸಿದರು.

Comments