ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ


ಮಂಗಳೂರು ; ಉಳ್ಳಾಲದ ಸೇತುವೆ ಬಳಿಯಿಂದ ಯುವಕ ನಾಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ತಲಪಾಡಿ ದೇವಿಪುರ ನಿವಾಸಿ ಸುರೇಂದ್ರ (45) ನಾಪತ್ತೆಯಾದವರು ಎಂದು ತಿಳಿದುಬಂದಿದೆ.

ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇವರು ಶುಕ್ರವಾರ ಮಧ್ಯಾಹ್ನ ವೇಳೆ ನೇತ್ರಾವತಿ ಸೇತುವೆ ಮೇಲೆ ನಡೆದುಕೊಂಡು ಹೋಗಿ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.

ನಾಪತ್ತೆಯಾದ ವ್ಯಕ್ತಿಗೆ ವಿಪರೀತ ಕುಡಿತದ ಚಟವಿದ್ದು, ಈತನ ಮೊಬೈಲ್ ಸೇತುವೆ ಮೇಲೆ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾದ ವ್ಯಕ್ತಿಯ ಪತ್ನಿಯೂ ನಗರದ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Comments