ಸೇವೆಯೇ ಸಂಘಟನೆ ತತ್ವದಿಂದ ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ: ಬಿಜೆಪಿ
Monday, July 27, 2020
(ಗಲ್ಪ್ ಕನ್ನಡಿಗ)ಉಡುಪಿ : ಬಿಜೆಪಿಯಿಂದ ಮಾತ್ರ ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿ ಸಾಧ್ಯವಿದೆ. ಇದನ್ನು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಜನಪರ ಕಾರ್ಯಗಳಿಂದ ಸಾಬೀತುಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ ಸೇವೆಯೇ ಸಂಘಟನೆ ತತ್ವದಿಂದ ಸಮಾಜದ ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಲು ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
(ಗಲ್ಪ್ ಕನ್ನಡಿಗ)ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
(ಗಲ್ಪ್ ಕನ್ನಡಿಗ)ಪ್ರದಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ವಿಕಸನದಿಂದ ದೇಶದ ವಿಕಾಸ ಸಾಧ್ಯ. ಮೋರ್ಚಾಗಳು ವಿವಿಧ ಕಾರ್ಯಕ್ರಮಗಳ ಮೂಲಕ ಕ್ರಿಯಾಶೀಲತೆಯಿಂದ ಜವಾಬ್ದಾರಿ ನಿರ್ವಹಿಸಿದಾಗ ಪಕ್ಷ ಸಂಘಟನೆ ಸದೃಢವಾಗುವುದು. ನಮ್ಮ ಎಲ್ಲಾ ಆಲೋಚನೆಗಳು ಮತ್ತು ಚಿಂತನೆಗಳು ಪಕ್ಷ ಸಂಘಟನೆಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು.
(ಗಲ್ಪ್ ಕನ್ನಡಿಗ) ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸರಿಯಾದ ದಿಕ್ಕಿನಲ್ಲಿ ಪ್ರಾರಂಭಿಸಿದ ಎಲ್ಲಾ ಕಾರ್ಯಗಳು ಯಶಸ್ವಿಯಾಗುವವು ಎಂಬ ಮಾತಿನಂತೆ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಹುಮ್ಮಸ್ಸು ಮುಂದಿನ ಯಶಸ್ಸಿನ ಶುಭ ಸೂಚನೆ. ಪಕ್ಷದ ಸಂಸ್ಥಾಪಕರ ನಿಸ್ವಾರ್ಥ ಮತ್ತು ಸಮರ್ಪಣಾಭಾವದ ಸೇವೆ, ತ್ಯಾಗ, ಬಲಿದಾನದಿಂದ ಇಂದು ಬಿಜೆಪಿ ಕಾರ್ಯಕರ್ತರ ಸ್ವಾಬಿಮಾನದ ಸಂಕೇತವಾಗಿ ಬೆಳೆದು ನಿಂತಿದೆ. ಜನಸೇವೆ ಹಾಗೂ ಪಕ್ಷ ಸಂಘಟನೆಯ ಮೂಲಕ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲೆಯ ಒಂದು ಮಾದರಿ ಮೋರ್ಚಾವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.
(ಗಲ್ಪ್ ಕನ್ನಡಿಗ) ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬುಬಕ್ಕರ್ ಮಾತನಾಡಿ ಅಲ್ಪಸಂಖ್ಯಾತ ವರ್ಗದ ಮಹಿಳೆಯರಿಗೆ ದುಸ್ವಪ್ನವೆನಿಸಿದ್ದ ತ್ರಿವಳಿ ತಲಾಖ್ ಪದ್ದತಿಯನ್ನು ರದ್ದುಗೊಳಿಸಿದ ಕೆಂದ್ರ ಸರಕಾರದ ದಿಟ್ಟ ಕ್ರಮ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಜನೋಪಯೋಗಿ ಯೋಜನೆಗಳ ನೆರವಿನಿಂದ ಅಲ್ಪಸಂಖ್ಯಾತರಿಗೆ ಬಿಜೆಪಿ ಪರ ಇರುವ ಬರವಸೆ ಇನ್ನಷ್ಟು ಹೆಚ್ಚಿದೆ. ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದರ ಜೊತೆಗೆ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡುವುದಾಗಿ ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಂಘಟನಾತ್ಮಕ ವಿಚಾರಗಳನ್ನು ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಎಸ್. ಕಲ್ಮಾಡಿ ಸ್ವಾಗತಿಸಿ, ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿ’ಸೋಜಾ, ಶೇಖ್ ಆಸಿಫ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.