ಕೊರೊನಾ ನಿರ್ವಹಣೆಯಲ್ಲಿ ಜಿಲ್ಲಾಡಳಿತದ ವೈಫಲ್ಯ ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ
(ಗಲ್ಪ್ ಕನ್ನಡಿಗ) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
(ಗಲ್ಪ್ ಕನ್ನಡಿಗ) ಕೊರೊನಾ ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕೊರೊನಾ ಚಿಕಿತ್ಸೆಗೆ ನಿರಾಕರಿಸುವ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
(ಗಲ್ಪ್ ಕನ್ನಡಿಗ) ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಡಿದ ಖರ್ಚಿನ ಲೆಕ್ಕ ಕೊಡಬೇಕು ಎಂದು ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಜಿಲ್ಲಾಡಳಿತದ ತಪ್ಪು ನೀತಿಯೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಅಧಿಕ ಸಂಖ್ಯೆ ಸಾವನ್ನಪ್ಪಲು ಕಾರಣ ಎಂದು ಆಪಾದಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೊರೊನಾ ನಿರ್ವಹಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿದರು.
(ಗಲ್ಪ್ ಕನ್ನಡಿಗ) ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕರಾದ ಜೆ.ಅರ್ ಲೋಬೊ, ಮೊಯ್ದಿನ್ ಬಾವ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
(ಗಲ್ಪ್ ಕನ್ನಡಿಗ)