-->

ವಿದೇಶದಿಂದ ಮಂಗಳೂರಿಗೆ ಬರುವವರ ಗಮನಕ್ಕೆ

ವಿದೇಶದಿಂದ ಮಂಗಳೂರಿಗೆ ಬರುವವರ ಗಮನಕ್ಕೆ

(ಗಲ್ಪ್ ಕನ್ನಡಿಗ) ವಿದೇಶಗಳಿಂದ ಬಂದವರ ಕ್ವಾರೆಂಟೈನ್ ಮಾಡುವ ಅವಧಿ ಬಗ್ಗೆ ಅವಾಸ್ತವಿಕ ಮಾಹಿತಿ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

(ಗಲ್ಪ್ ಕನ್ನಡಿಗ) ವಿದೇಶಗಳಿಂದ ಬಂದವರು ಕಡ್ಡಾಯವಾಗಿ 14 ದಿನ ಕ್ವಾರೆಂಟೈನ್ ಇರಬೇಕಾಗುತ್ತದೆ. ಇದರಲ್ಲಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ನಲ್ಲಿ ( ಲಾಡ್ಜ್ ) ಇರಲೇಬೇಕು. ಈ ಅವಧಿಯಲ್ಲಿ ಅವರ ಗಂಟಲದ್ರವ ಪರೀಕ್ಷೆ ನಡೆಸಿ, ನೆಗೆಟಿವ್ ಬಂದರೆ ಎಳನೇ ದಿನದ ನಂತರ ಹೋಂ ಕ್ವಾರೆಂಟೈನ್ ಗೆ ಕಳುಹಿಸಲಾಗುತ್ತದೆ.


(ಗಲ್ಪ್ ಕನ್ನಡಿಗ) ಆದರೆ, ವಿದೇಶದಿಂದ ಬಂದವರಲ್ಲಿ 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲಿನವರು, ಗರ್ಭಿಣಿಯರು, ಇತರೆ ಖಾಯಿಲೆಗಳಿಂದ ಬಳಲುತ್ತಿರುವವರನ್ನು ಸಾಂಸ್ಥಿಕ ಕ್ವಾರೆಂಟೈನ್ (ಲಾಡ್ಜ್) ಗೆ ಕಳುಹಿಸಿದ ಮರುದಿನವೇ ಅವರ ಗಂಟಲದ್ರವ ಮಾದರಿ ಸಂಗ್ರಹಿಸಲಾಗುತ್ತದೆ. ನಂತರ ಲ್ಯಾಬ್ ವರದಿ ನೆಗೆಟಿವ್ ಬಂದರೆ ಮಾತ್ರ ಅವರನ್ನು 14 ದಿನಗಳ ಹೋಂ ಕ್ವಾರೆಂಟೈನ್ ಗೆ ಕಳುಹಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
(ಗಲ್ಪ್ ಕನ್ನಡಿಗ)

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99