ಗೋ ಸಾಗಾಟ ವಿವಾದದ ಬೆನ್ನಿಗೆ ದ.ಕ ಜಿಲ್ಲಾಧಿಕಾರಿ ವರ್ಗಾವಣೆ: ವರ್ಗಾವಣೆಗೆ ಇದೇ ಕಾರಣವಾಯ್ತ?
(ಗಲ್ಪ್ ಕನ್ನಡಿಗ) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಧಿಡೀರ್ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ಬೆಳಗಾವಿ ಜಿ. ಪಂ ಸಿಇಓ ಆಗಿದ್ದ ಡಾ. ಕೆ ವಿ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.
(ಗಲ್ಪ್ ಕನ್ನಡಿಗ) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಈ ಕೆಳಗಿನಂತೆ ನಿನ್ನೆ ಪತ್ರಿಕಾ ಹೇಳಿಕೆ ನೀಡಿದ್ದರು.
ಜಿಲ್ಲಾಧಿಕಾರಿ ನೀಡಿದ ಪೂರ್ತಿ ಹೇಳಿಕೆಗೆ ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ) ಯಾವುದೇ ಕಾರಣಕ್ಕೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಸು/ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳನ್ನು ಸಾಗಾಣಿಕೆ ಅಥವಾ ವಧೆ ಮಾಡುವಂತಿಲ್ಲ. ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು.
(ಗಲ್ಪ್ ಕನ್ನಡಿಗ) ಅಕ್ರಮವಾಗಿ ಅಥವಾ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಣಿಕೆ ಮಾಡುವ ಸಂಧರ್ಭದಲ್ಲಿ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಕಾನೂನ್ನು ಉಲ್ಲಂಘಿಸಿ ಜಾನುವಾರು ಸಾಗಾಣಿಕೆ ಮಾಡುವ ವಾಹನ ಅಥವಾ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
(ಗಲ್ಪ್ ಕನ್ನಡಿಗ) ಈ ವಿಚಾರದ ಕುರಿತಂತೆ ನಿನ್ನೆ ಸಂಘಪರಿವಾರ ಮತ್ತು ಹಿಂದುಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ಜಾಲತಾಣದಲ್ಲಿ ಚರ್ಚೆಯನ್ನು ಮಾಡಿದ್ದವು. ಬಿಜೆಪಿ ಸರಕಾರ ಇರುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರ ಈ ರೀತಿ ಹೇಳಿಕೆ ಯಾಕೆ ನೀಡಿದರು ಎಂಬರ್ಥದಲ್ಲಿ ಚರ್ಚೆಗಳು ನಡೆದಿದ್ದವು. ರಾಮಸೇನೆಯ ವಾಟ್ಸಪ್ ಗ್ರೂಪ್ ವೊಂದರಲ್ಲಿ "ಫಸ್ಟ್ ಮೊಲೆನ್ ಕರ್ತ್ ಕೆರೊಡ್ "(ಮೊದಲು ಇವಳನ್ನು ಕಡಿದು ಕೊಲ್ಲಬೇಕು) ಎಂಬ ಜೀವಬೆದರಿಕೆಯ ಬರಹವನ್ನು ಹಾಕಲಾಗಿತ್ತು.
ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ) ಇಂದು ಬೆಳಿಗ್ಗೆ ದ.ಕ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ಟ್ವಿಟರ್ ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಜಾನುವಾರು ಸಾಗಾಣಿಕೆಗೆ ಸಂಬಂಧಿಸಿದಂತೆ ಅನೇಕರು ಗೊಂದಲ ಉಂಟುಮಾಡುತ್ತಿರುವುದು ಕಂಡುಬಂದಿರುತ್ತದೆ.ಯಾವುದೇ ಅಕ್ರಮ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಪೊಲೀಸರಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು.ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡಲಾಗಿತ್ತು. ಇದರ ಬೆನ್ನಿಗೆ ಅವರ ವರ್ಗಾವಣೆ ಆದೇಶ ಬಂದಿದೆ.
(ಗಲ್ಪ್ ಕನ್ನಡಿಗ)ದ.ಕ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ಗೆ ಡೈರೆಕ್ಟರ್ ಆಗಿ ನೇಮಕಗೊಳಿಸಲಾಗಿದೆ. ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಶ್ರಮವಹಿಸಿದ್ದ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಮ್ಮ ಪುಟ್ಟ ಮಗುವನ್ನು ಬೆಂಗಳೂರಿನಲ್ಲಿ ಬಿಟ್ಟು ಕಾರ್ಯನಿರ್ವಹಿಸುತ್ತಿದ್ದರು. ಅವರು ಸ್ವ ಇಚ್ಚೆಯಿಂದ ಬೆಂಗಳೂರು ವರ್ಗಾವಣೆ ಕೋರಿದ್ದರು ಎಂಬುದು ಮೂಲಗಳಿಂದ ತಿಳಿದುಬಂದಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಮತ್ತು ಇಂದು ನಡೆದ ಘಟನೆಯ ಬೆನ್ನಿಗೆ ಈ ಆದೇಶ ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ