-->
ವಿಧಾನಪರಿಷತ್ ಸದಸ್ಯ ಯಲ್ಲಾಪುರದ ಹಿತ್ಲಳ್ಳಿಯ ಶಾಂತಾರಾಮ ಸಿದ್ಧಿಯವರ ಮನೆಗೆ ಸಚಿವ ಕೋಟಾ ಭೇಟಿ

ವಿಧಾನಪರಿಷತ್ ಸದಸ್ಯ ಯಲ್ಲಾಪುರದ ಹಿತ್ಲಳ್ಳಿಯ ಶಾಂತಾರಾಮ ಸಿದ್ಧಿಯವರ ಮನೆಗೆ ಸಚಿವ ಕೋಟಾ ಭೇಟಿ



(ಗಲ್ಪ್ ಕನ್ನಡಿಗ) ವಿಧಾನ ಪರಿಷತ್ತಿನ ನೂತನ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಬುಡಕಟ್ಟು ಸಿದ್ದಿ ಜನಾಂಗದ ಶಾಂತರಾಮ ಸಿದ್ದಿಯವರ ಯಲ್ಲಾಪುರದ ಹಿತ್ಲಳ್ಳಿಯ ಮನೆಗೆ ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿದರು.


                                video


(ಗಲ್ಪ್ ಕನ್ನಡಿಗ) ಶಾಂತರಾಮ ಸಿದ್ದಿಯವರ ಮನೆಗೆ ಭೇಟಿ ನೀಡಿದ ಕೋಟ, ಕಾಡು-ಮೇಡು, ಗುಡ್ಡ-ಬೆಟ್ಟಗಳಲ್ಲಿ ಬದುಕಿ‌ ಬಾಳುತ್ತಿರುವ, ಕಾಡಿನ ಮಕ್ಕಳೆಂದೆ ಪರಿಗಣಿಸಲ್ಪಡುತ್ತಿರುವ ವನವಾಸಿಗಳನ್ನು ಒಟ್ಟುಗೂಡಿಸಿ ಆ ಜನಾಂಗದಲ್ಲಿ ರಾಷ್ಟ್ರೀಯತೆ ಮತ್ತು ರಾಷ್ಟ್ರ ಭಕ್ತಿ ಮೂಡಿಸುತ್ತಿರುವ ಶಾಂತರಾಮ ಸಿದ್ದಿಯವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದು ನಮ್ಮ ಸರ್ಕಾರಕ್ಕೊಂದು ಹೆಮ್ಮೆ ಎಂದು‌ ಅಭಿಪ್ರಾಯಪಟ್ಟರು.



(ಗಲ್ಪ್ ಕನ್ನಡಿಗ) ಕಡು ಬಡತನದಲ್ಲಿ ಬದುಕಿ ಬಾಳುತ್ತಿದ್ದ ಶಾಂತರಾಮ ಸಿದ್ದಿಯವರನ್ನು ಶಾಸಕರನ್ನಾಗಿ‌ ಮಾಡಿದ ಪ್ರಧಾನಿ ‌ನರೇಂದ್ರ ಮೋದಿ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ,‌ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ‌ಬಿ.ಎಲ್. ಸಂತೋಷ್, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್,ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪನವರ ಸಹಿತ, ಬಿಜೆಪಿ ಪಾರ್ಟಿಯ ಸರ್ವರು ಅಭಿನಂದನಾರ್ಹರು ಎಂದು ಸಚಿವ‌ ಕೋಟ ಬಾವುಕರಾಗಿ ಹೇಳಿದರು.

Ads on article

Advertise in articles 1

advertising articles 2

Advertise under the article