
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಾಲೂಕು ಪ್ರವಾಸ
(Gulf kannadiga) ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
(Gulf kannadiga) ಜುಲೈ 27 ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ ಮತ್ತು ಜುಲೈ 28 ರಂದು ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ, ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ದ.ಕ ಜಿಲ್ಲೆ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರು ತಿಳಿಸಿದ್ದಾರೆ