ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟ: ಏಳುಮಂದಿ ಸಾವು, 153 ಪಾಸಿಟಿವ್



(ಗಲ್ಪ್ ಕನ್ನಡಿಗ)ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಹೆಚ್ಚಿದ್ದು ಇಂದು ಏಳು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಸಾವನ್ನಪ್ಪಿದ ಏಳು ಮಂದಿಯು ಮಂಗಳೂರು ತಾಲೂಕಿನವರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.


ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ



(ಗಲ್ಪ್ ಕನ್ನಡಿಗ)ಜಿಲ್ಲೆಯಲ್ಲಿ ಇಂದು 153 ಮಂದಿಗೆ ಕೊರೊನಾ ದೃಢಪಟ್ಟಿದ್ದು ಇದರಲ್ಲಿ 119 ಮಂದಿ ಮಂಗಳೂರು ತಾಲೂಕಿನವರಾಗಿದ್ದಾರೆ. ಬಂಟ್ವಾಳ ತಾಲೂಕಿನ 11 , ಬೆಳ್ತಂಗಡಿ ತಾಲೂಕಿನ 6 , ಪುತ್ತೂರು ತಾಲೂಕಿನ 4, ಸುಳ್ಯ ತಾಲೂಕಿನ ಒಬ್ಬರಿಗೆ ಮತ್ತು ಇತರ ಜಿಲ್ಲೆಯ 12 ಮಂದಿಗೆ ಇಂದು ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ದೃಢಪಟ್ಟವರ ಸಂಖ್ಯೆ 6168 ಕ್ಕೆ ಏರಿಕೆಯಾಗಿದೆ.


(ಗಲ್ಪ್ ಕನ್ನಡಿಗ) ಜಿಲ್ಲೆಯಲ್ಲಿ ಇಂದು 124 ಮಂದಿ ಗುಣಮುಖರಾಗಿದ್ದು ಈವರೆಗೆ 2854 ಮಂದಿ ಗುಣಮುಖರಾಗಿದ್ದಾರೆ. 3138 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ