
ಮಂಗಳೂರಿನಲ್ಲಿ ಇಂದು 166 ಹೊಸ ಕೊರೊನಾ ಪಾಸಿಟಿವ್ ಪತ್ತೆ; 6,881ಕ್ಕೇರಿದ ಸೋಂಕಿತರ ಸಂಖ್ಯೆ
(ಗಲ್ಪ್ ಕನ್ನಡಿಗ)ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 166 ಮಂದಿಯಲ್ಲಿ ಕೊರೊನಾ ದೃಢ ಪಟ್ಟಿದ್ದು, ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 6881ಕ್ಕೆ ಏರಿಕೆಯಾಗಿದೆ.
ಗಲ್ಪ್ ಕನ್ನಡಿಗ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
(ಗಲ್ಪ್ ಕನ್ನಡಿಗ)ಈ ಪೈಕಿ ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣಗಳಿಂದ 96 ಮಂದಿಯಲ್ಲಿ ಕೊರೊನಾ ಸೊಂಕು ದೃಢಪಟ್ಟಿದ್ದರೆ, ಪ್ರಾಥಮಿಕ ಸಂಪರ್ಕದಿಂದಾಗಿ 19 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕು ತಗುಲಿರುವ ಮೂಲಗಳು ಪತ್ತೆಯಾಗದ 51 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಎಲ್ಲ ಪಾಸಿಟಿವ್ ಸೋಂಕಿತರನ್ನು ವಿವಿಧ ಖಾಸಗಿ, ವೆನ್ಲಾಕ್ ಕೋವಿಡ್ ಆಸ್ಪತ್ರೆ, ಕೊರೊನಾ ಕೇರ್ ಸೆಂಟರ್‌ಗಳಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
(ಗಲ್ಪ್ ಕನ್ನಡಿಗ)ಇಂದು 188 ಮಂದಿ ಗುಣಮುಖರಾಗಿ ಬಿಡುಗಡೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 3304 ಮಂದಿ ಕೊರೊನಾ ದಿಂದ ಗುಣಮುಖರಾಗಿದ್ದಾರೆ
(ಗಲ್ಪ್ ಕನ್ನಡಿಗ)ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 6,881 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ವಿವಿಧ ಖಾಸಗಿ ಆಸ್ಪತ್ರೆ, ವೆನ್ಲಾಕ್ ಕೋವಿಡ್ ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ 3,369 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಾಹಿತಿ ನೀಡಿದೆ.