ದ.ಕ.ದಲ್ಲಿ ಇಂದು 193 ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆ(ಗಲ್ಫ್ ಕನ್ನಡಿಗ)ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಭಾನುವಾರ 193 ಮಂದಿಗೆ ಸೋಂಕು ದೃಢ ಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10,330ಕ್ಕೆ ಏರಿಕೆಯಾಗಿದೆ.


(ಗಲ್ಫ್ ಕನ್ನಡಿಗ)ಇಂದು ಪತ್ತೆಯಾದ ಸೋಂಕಿತರ ಪೈಕಿ ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣಗಳಿಂದ 150 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 45 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಹೊರ ಜಿಲ್ಲೆಯ ಒಬ್ಬರು ಹಾಗೂ 34 ಪ್ರಕರಣಗಳಲ್ಲಿ ಸೋಂಕು ತಗುಲಿರುವ ಮೂಲ ಪತ್ತೆಯಾಗಿಲ್ಲ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,343 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಎಲ್ಲರೂ ವಿವಿಧ ಖಾಸಗಿ ಆಸತ್ರೆ, ವೆನ್ಲಾಕ್ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.


(ಗಲ್ಫ್ ಕನ್ನಡಿಗ)ಕೋವಿಡ್ ಹಿನ್ನೆಲೆಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆದು 97ಮಂದಿ ಗುಣಮುಖರಾಗಿದ್ದು, ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 67 ಮಂದಿ ಸೇರಿ ಇಂದು ಒಟ್ಟು 164 ಮಂದಿ ಕೋವಿಡ್ ನಿಂದ ಇಂದು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 7,677ಮಂದಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದಂತಾಗಿದೆ.

(ಗಲ್ಫ್ ಕನ್ನಡಿಗ)