ಸೋಂಕಿನಿಂದ ಗುಣಮುಖರಾಗಿ ಕರ್ತವ್ಯನಿರತ 20 ಪೊಲೀಸರಿಗೆ ಸನ್ಮಾನ.......
Saturday, August 15, 2020
ಸೋಂಕಿನಿಂದ ಗುಣಮುಖರಾಗಿ ಕರ್ತವ್ಯ ನಿರತ 20 ಪೊಲೀಸರಿಗೆ ಸನ್ಮಾನ......
ಕೋರೋನಾ ಸೈನಿಕರಾಗಿ ಕೆಲಸ ಮಾಡುತ್ತಿದ್ದ 20 ಪೊಲೀಸ್ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸಂಪೂರ್ಣ ಗುಣಮುಖರಾಗಿ ಪುನಹ ಕರ್ತವ್ಯದಲ್ಲಿ ನಿರತನಾಗಿದ್ದು ಅವರನ್ನು ಇಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ವಂಶಿಕೃಷ್ಣ ಶಾಲು ಹೊದಿಸಿ ಹಾರ ಹಾಕಿ ಗೌರವಿಸಿದರು. ಇದೇ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಹಾಜರಿದ್ದರು.