ಮಾಜಿ ಪ್ರಧಾನಿ ದೇವೇಗೌಡರಿಂದ ಆಗಸ್ಟ್ 20ರಂದು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ......

ಮಾಜಿ ಪ್ರಧಾನಿ ದೇವೇಗೌಡರಿಂದ ಆಗಸ್ಟ್ 20ರಂದು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ......

ತುಮಕೂರು
ಭೂಸುಧಾರಣಾ ಕಾಯ್ದೆ, ಎಪಿಎಂಸಿ  ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಆಗಸ್ಟ್ 20ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ತುಮಕೂರಿನಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಗೌರಿಶಂಕರ್, ಈ ತಿದ್ದುಪಡಿ ಕಾಯ್ದೆ ಗಳನ್ನು ವಾಪಸ್ ಪಡೆಯಬೇಕು ಇವೆಲ್ಲವೂ ರೈತರ ಮರಣ ಶಾಸನ ಬರೆದಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಹೀಗಾಗಿ ಈ ತಿದ್ದುಪಡಿ ಕಾಯ್ದೆ ವಿರೋಧಿಸಿ ಜೆಡಿಎಸ್ ನಿರಂತರ ಹೋರಾಟ ಮಾಡಲಿದೆ ಪ್ರತಿಭಟನಾ ಧರಣಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಕೂಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕೋರೋನಲ್ ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಮುಖಂಡರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲಿದ್ದಾರೆ ಮತ್ತು ಮಾಸ್ಕಗಳನ್ನು ಧರಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.