ದ.ಕ.ದಲ್ಲಿ ಬುಧವಾರ 229 ಹೊಸ ಕೊರೊನಾ ಪಾಸಿಟಿವ್ ಪತ್ತೆ; 498 ಮಂದಿ ಡಿಸ್ಚಾರ್ಜ್


(ಗಲ್ಪ್ ಕನ್ನಡಿಗ)ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರ ಬರೋಬ್ಬರಿ 243 ಮಂದಿಗೆ ಕೋವಿಡ್- 19 ದೃಢ ಪಟ್ಟಿದ್ದರೆ, ಇಂದು ಮತ್ತೆ 229 ಮಂದಿಗೆ ಕೊರೊನಾ ಇರುವುದು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7825ಕ್ಕೆ ಏರಿಕೆ ಯಾಗಿದೆ.

(ಗಲ್ಪ್ ಕನ್ನಡಿಗ) ಇಂದು ಪತ್ತೆಯಾದ ಪ್ರಕರಣಗಳ ಪೈಕಿ 124 ಮಂದಿಗೆ ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣಗಳಿಂದ ಸೊಂಕು ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 36 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. 69 ಪ್ರಕರಣಗಳಲ್ಲಿ ಸೋಂಕು ತಗುಲಿರುವ ಮೂಲಗಳು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,625 ಕೊರೊನಾ ಆಕ್ಟಿವ್ ಪ್ರಕರಣಗಳಿದ್ದು, ಎಲ್ಲರೂ ವಿವಿಧ ಖಾಸಗಿ ಆಸ್ಪತ್ರೆ, ವೆನ್ಲಾಕ್ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

(ಗಲ್ಪ್ ಕನ್ನಡಿಗ)ಇವರಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತಸೆ ಪಡೆದ 89 ಮಂದಿ, ಮನೆಗಳಲ್ಲೇ ಚಿಕಿತ್ಸೆ ಪಡೆದ 364 ಮಂದಿ, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 45 ಮಮದಿ ಸೇರಿ ಇಂದು 498 ಮಂದಿ ಇಂದು ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 5, 232 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

(ಗಲ್ಪ್ ಕನ್ನಡಿಗ)ಜಿಲ್ಲೆಯಲ್ಲಿ ಇದುವರೆಗೆ 59,750 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 51,925 ಮಂದಿಯ ವರದಿ ನೆಗೆಟಿವ್ ಬಂದಿದ್ದು, 7825 ಮಂದಿಯ ವರಿದಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ