ಬೆಂಗಳೂರಿನಲ್ಲಿ ಫೈರಿಂಗ್ ಗೆ 3 ಮಂದಿ ಬಲಿ; 2 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಪ್ಯೂ!


(ಗಲ್ಫ್ ಕನ್ನಡಿಗ)ಬೆಂಗಳೂರು; ಬೆಂಗಳೂರಿನಲ್ಲಿ ರಾತ್ರಿ ನಡೆದ ಗಲಭೆಯ ವೇಳೆ ನಡೆದ ಫೈರಿಂಗ್ ನಲ್ಲಿ ಮೂವರು ಸಾವನ್ನಪ್ಪಿದ್ದು   , ಪರಿಸ್ಥಿತಿ ನಿಯಂತ್ರಿಸಲು ಎರಡು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ.

(ಗಲ್ಫ್ ಕನ್ನಡಿಗ)ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ ಮಾಡಲಾಗಿದೆ.  ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

(ಗಲ್ಫ್ ಕನ್ನಡಿಗ)ಬೆಂಗಳೂರು ನಗರದಲ್ಲಿ ಸಂಪೂರ್ಣ ಖಾಕಿ ಕಣ್ಗಾವಲು ಇಡಲಾಗಿದೆ. ಕರ್ಪ್ಯೂ ಜಾರಿಯಲ್ಲಿರುವ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯಿಂದ ಹೊರಬಾರದಂತೆ ಪೊಲೀಸರು ಎಚ್ಚರಿಸಿದ್ದಾರೆ.

(ಗಲ್ಫ್ ಕನ್ನಡಿಗ)ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುವ ವೇಳೆ ಬಹುತೇಕ ಮಂದಿಗೆ ಗಾಯವಾಗಿದ್ದು ಮೂವರು ಸಾವನ್ನಪ್ಪಿದ್ದಾರೆ.  ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

(ಗಲ್ಫ್ ಕನ್ನಡಿಗ)