ಪಂಪ್‌ವೆಲ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: 3 ಯುವತಿಯರ ರಕ್ಷಣೆ


(ಗಲ್ಫ್ ಕನ್ನಡಿಗ)ಮಂಗಳೂರು:  ಪಂಪ್‌ವೆಲ್ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ 2 ಮಂದಿಯನ್ನು ಪೊಲೀಸರು ಬಂಧಿಸಿದ್ದು 3 ಯುವತಿಯರನ್ನು ರಕ್ಷಿಸಿದ್ದಾರೆ.


(ಗಲ್ಫ್ ಕನ್ನಡಿಗ)ಕಡಂದಲೆ ನಿವಾಸಿ ಹರೀಶ(45), ಬೊಳುವಾರು ನಿವಾಸಿ ಸಾಗರ್ (40) ಬಂಧಿತರು.


(ಗಲ್ಫ್ ಕನ್ನಡಿಗ)ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಲಾಡ್ಜ್ ಸಿಬ್ಬಂದಿ ಹರೀಶ ಮತ್ತು ಬ್ರೋಕರ್ ಸಾಗರ್ ಎಂಬವರನ್ನು ಬಂಧಿಸಿದ್ದಾರೆ. ಅಲ್ಲದೆ, ದಂಧೆಯ ಸ್ಥಳದಲ್ಲಿದ್ದ 3 ಯುವತಿಯರನ್ನು ರಕ್ಷಿಸಿದ್ದಾರೆ. ಈ ಕುರಿತು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.