ದ.ಕ.ದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ-ಇಂದು 307 ಹೊಸ ಪ್ರಕರಣ ಪತ್ತೆ; 8,378ಗೆ ತಲುಪಿದ ಸೋಂಕಿತರ ಸಂಖ್ಯೆ
(ಗಲ್ಪ್ ಕನ್ನಡಿಗ)ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಇಂದು 307 ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 8,378ಗೆ ತಲುಪಿದೆ ಎಂದು ಜಿಲ್ಲಾಡಳಿತ ಹೇಳಿದೆ.
(ಗಲ್ಪ್ ಕನ್ನಡಿಗ) ಇಂದು ಪತ್ತೆಯಾದ ಸೋಂಕಿತರಲ್ಲಿ ತೀವ್ರ ಉಸಿರಾಟ ಸಮಸ್ಯೆ ಮತ್ತು ಶೀತ ಲಕ್ಷಣಗಳಿಂದ 139 ಮಂದಿಗೆ ಸೊಂಕು ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ 44ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, 124 ಪ್ರಕರಣಗಳಲ್ಲಿ ಸೋಂಕು ತಗುಲಿರುವ ಮೂಲಗಳು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,625 ಕೊರೊನಾ ಆಕ್ಟಿವ್ ಪ್ರಕರಣಗಳಿದ್ದು, ಎಲ್ಲರೂ ವಿವಿಧ ಖಾಸಗಿ ಆಸ್ಪತ್ರೆ, ವೆನ್ಲಾಕ್ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
(ಗಲ್ಪ್ ಕನ್ನಡಿಗ)ಇವರಲ್ಲಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆಗೆ ಒಳಗಾಗಿದ್ದ 7ಮಂದಿ, ಮನೆಗಳಲ್ಲೇ ಚಿಕಿತ್ಸೆ ಪಡೆದು ಗುಣಮುಖರಾದ 175 ಮಂದಿ, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು 60ಮಂದಿ ಸೇರಿ ಇಂದು ಒಟ್ಟು 242 ಮಂದಿ ಕೋವಿಡ್ ಮುಕ್ತರಾಗಿದ್ದಾರೆ ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 6,115 ಮಂದಿ ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 66,056 ಮಂದಿಯನ್ನು ಕೊರೊನಾ ಸೋಂಕು ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 8,378 ಮಂದಿಯ ವರದಿಯಲ್ಲಿ ಕೋರೊನಾ ಸೊಂಕು ತಗುಲಿರುವುದು ಪತ್ತೆಯಾಗಿದೆ.