-->

ಮಂಗಳೂರಿನಲ್ಲಿ ಆಗಷ್ಟ್ 4 ರಾತ್ರಿಯಿಂದ 144 ರನ್ವಯ ನಿರ್ಬಂಧಕಾಜ್ಞೆ

ಮಂಗಳೂರಿನಲ್ಲಿ ಆಗಷ್ಟ್ 4 ರಾತ್ರಿಯಿಂದ 144 ರನ್ವಯ ನಿರ್ಬಂಧಕಾಜ್ಞೆ


(ಗಲ್ಪ್ ಕನ್ನಡಿಗ)ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಆಗಷ್ಟ್ 5 ರಂದು ಭೂಮಿ ಪೂಜೆ ನಡೆಯಲಿರುವುದರಿಂದ ಮತೀಯ, ರಾಜಕೀಯ ಗಲಭೆಗಳು ನಡೆಯದಂತೆ ತಡೆಯಲು ಆಗಷ್ಟ್ 4 ರಾತ್ರಿಯಿಂದ 144 ಸೆಕ್ಷನ್ ರನ್ವಯ ನಿರ್ಬಂಧಕಾಜ್ಞೆ ವಿಧಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.


(ಗಲ್ಪ್ ಕನ್ನಡಿಗ)ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುವ ಸಂದರ್ಭದಲ್ಲಿ ಮತೀಯ, ರಾಜಕೀಯ ಗಲಭೆಗಳನ್ನು ಮತ್ತು ಸಾರ್ವಜನಿಕ ಪ್ರಾಣ, ಆಸ್ತಿಪಾಸ್ತಿ ಹಾನಿಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ನಿರ್ಬಂಧಕಾಜ್ಞೆ ಹಾಕಲಾಗಿದೆ. ಆಗಷ್ಟ್ 4 ರಂದು ರಾತ್ರಿ 8 ಗಂಟೆಯಿಂದ ಆಗಷ್ಟ್ 6 ಬೆಳಿಗ್ಗೆ 6 ಗಂಟೆಯವರೆಗೆ ಈ ನಿರ್ಬಂಧಾಕಾಜ್ಞೆ ಜಾರಿಯಲ್ಲಿರುತ್ತದೆ.


(ಗಲ್ಪ್ ಕನ್ನಡಿಗ)ಈ ಸಂದರ್ಭದಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು, ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಬಂದೂಕುಗಳು, ಚಾಕುಗಳು, ಕೋಲುಗಳು ಅಥವಾ ಲಾಠಿಗಳನ್ನು, ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು, ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು, ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಧರಣಿ, ಮುಷ್ಕರ ರಾಸ್ತಾರೋಕೋ, ಮುತ್ತಿಗೆ, ಬೈಕ್ rally, ಸಮಾರಂಭಗಳನ್ನು ನಡೆಸುವುದನ್ನು , ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು , ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ಮತ್ತಿತ್ತರ ವಿಚಾರಗಳನ್ನು ನಿಷೇಧಿಸಲಾಗಿದೆAds on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99