ದ.ಕ. ಜಿಲ್ಲೆಯಲ್ಲಿಂದು ಕೊರೊನಾಗೆ 6ಬಲಿ; 256ಕ್ಕೇರಿದ ಸಾವಿನ ಸಂಖ್ಯೆ
Friday, August 14, 2020
(ಗಲ್ಪ್ ಕನ್ನಡಿಗ)ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾ ದೃಢಪಟ್ಟಿದ್ದ 6 ಮಂದಿ ಮೃತಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 256ಕ್ಕೆ ಏರಿಕೆಯಾಗಿದೆ. ಮೃತರ ಪೈಕಿ ಮಂಗಳೂರು ತಾಲೂಕಿನ ನಾಲ್ವರು, ಮೂಡಬಿದಿರೆಯ ಒಬ್ಬರು, ಬಂಟ್ವಾಳ ತಾಲೂಕಿನ ಒಬ್ಬರು ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿ ಇಂದು ಆರು ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 256ಕ್ಕೆ ಏರಿಕೆಯಾಗಿದೆ.
(ಗಲ್ಪ್ ಕನ್ನಡಿಗ)ಮೃತರೆಲ್ಲರೂ ವಿವಿಧ ಕಾಯಿಲೆಗಳಿಂದಾಗಿ ನಗರದ ವಿವಿಧ ಖಾಸಗಿ ಹಾಗೂ ಕೋವಿಡ್ ಆಸ್ಪತ್ರೆ ವೆನ್ಲಾಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.