ಕಾರವಾರದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ
Saturday, August 15, 2020
ಕಾರವಾರ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಇಂದು ಕಾರವಾರದ ಪೋಲಿಸ್ ಪರೇಡ್ ಮೈದಾನದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಪೋಲಿಸರಿಂದ ಗೌರವ ವಂದನೆ ಸ್ವೀಕರಿಸಿದರು.
ಈ ವೇಳೆ ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ್, ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಹಾಜರಿದ್ದರು.