-->

ಬೋಳೂರು ಮಠದಕಣಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ಬಿಡುಗಡೆ -ಗುದ್ದಲಿಪೂಜೆ ನೆರವೇರಿಸಿದ ಶಾಸಕ ಕಾಮತ್

ಬೋಳೂರು ಮಠದಕಣಿ ರಸ್ತೆ ಅಭಿವೃದ್ಧಿಗೆ 75 ಲಕ್ಷ ಬಿಡುಗಡೆ -ಗುದ್ದಲಿಪೂಜೆ ನೆರವೇರಿಸಿದ ಶಾಸಕ ಕಾಮತ್


(ಗಲ್ಪ್ ಕನ್ನಡಿಗ) ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಮಠದಕಣಿ ನಾಲ್ಕನೇ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.


(ಗಲ್ಪ್ ಕನ್ನಡಿಗ)  ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬೋಳೂರು ಮಠದಕಣಿ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಸ್ಥಳೀಯ ಮನಪಾ ಸದಸ್ಯರು ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಲೋಕೋಪಯೋಗಿ ಇಲಾಖೆಯ ಮೂಲಕ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಸ್ ತೆರಳಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಲ್ಪಮಟ್ಟದ ತೊಡಕಾದರೂ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.


(ಗಲ್ಪ್ ಕನ್ನಡಿಗ) ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು ಮಾತನಾಡಿ ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಕೊಡುಗೆ ಅವಸ್ಮರಣೀಯ ಹಾಗೂ ಅದಕ್ಕಾಗಿ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮಠದಕಣಿ 4ನೇ ಅಡ್ಡರಸ್ತೆಯ ಅಭಿವೃದ್ಧಿಗೆ 75 ಲಕ್ಷ ಅನುದಾನ ಒದಗಿಸಿ ಈ ಪರಿಸರದ ಜನರ ಬೇಡಿಕೆಯನ್ನು ಸಾಕಾರಗೊಳಿಸಿದ್ದಾರೆ ಎಂದರು.


(ಗಲ್ಪ್ ಕನ್ನಡಿಗ)  ಈ ಸಂದರ್ಭದಲ್ಲಿ ಬೋಳೂರು ವಾರ್ಡ್ ಕಾರ್ಪೋರೇಟರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮ. ಮ ನ ಪಾ ಸಮಸ್ಯೆಯರಾದ ಜಯಲಕ್ಶ್ಮಿ ಶೆಟ್ಟಿ ,ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ,ಬೋಳೂರು ವಾರ್ಡ್ ಪ್ರಮುಖರಾದ ಕಿರಣ್ ಶೆಟ್ಟಿ , ಕಾರ್ತಿಕ್ ಬಂಗೇರ,ಸಂದೀಪ್, ರೋಶನ್ ,ಸುಹಾಗ್, ವಿಜಯೇಂದ್ರ ಹಾಗೂ ಮೊದಲಾದವರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99